ನಾರಾಯಣಪುರ ಜಲಾಶಯಕ್ಕೆ ಒಳ ಹರಿವು ಹೆಚ್ಚಳ

0
15
Advertisement


ರಾಯಚೂರು,ಜೂನ್‌. 14- ಭಾರೀ ಮಳೆ ಹಿನ್ನೆಲೆ ನಾರಾಯಣಪುರ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದ್ದು,ಹಂತ ಹಂತವಾಗಿ ಕೃಷ್ಣಾ ನೀರು ಬಿಡುಗಡೆ ಮಾಡಲಾಗುತ್ತಿದೆ.ಜಿಲ್ಲೆಯ ಕೃಷ್ಣಾ ನದಿ ಪಾತ್ರದ ಜನರಿಗೆ ಅಲರ್ಟ್‌ ಘೋಷಿಸಲಾಗಿದೆ. ನದಿ ಪಾತ್ರಕ್ಕೆ ಯಾರೂ ತೆರಳದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ನೀಡಿದೆ.

ಸದ್ಯ ಜಲಾಶಯದಿಂದ 29,226 ಕ್ಯೂಸೆಕ್‌ನಷ್ಟು ನೀರನ್ನು 7 ಗೇಟ್‌ಗಳ ಮೂಲಕ ಕೃಷ್ಣಾ ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ನಾರಾಯಣಪುರ ಜಲಾಶಯಕ್ಕೆ 30,000 ಕ್ಯೂಸೆಕ್‌ ಒಳಹರಿವು ಇದ್ದು, 85.41% ರಷ್ಟು ಭರ್ತಿಯಾಗಿದೆ. ಗರಿಷ್ಠ ಮಟ್ಟ 492.25 ಮೀಟರ್‌ನಲ್ಲಿ 491.15 ಮೀಟರ್‌ ತಲುಪಿದೆ. 33.313 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ 28.45 ಟಿಎಂಸಿ ನೀರು ಸಂಗ್ರಹವಾಗಿದೆ. ಒಳಹರಿವು ಹೆಚ್ಚಾದಂತೆ ಹೆಚ್ಚು ಪ್ರಮಾಣದ ನೀರು ಕೃಷ್ಣಾ ನದಿಗೆ ಹರಿಸುವ ಸಾಧ್ಯತೆ ಹಿನ್ನೆಲೆ ರಾಯಚೂರು ಜಿಲ್ಲಾಡಳಿತ ಜನ ಜಾನುವಾರುಗಳೊಂದಿಗೆ ನದಿ ಬಳಿ ಹೋಗದಂತೆ ಎಚ್ಚರಿಕೆ ನೀಡಿದೆ.



Source link

LEAVE A REPLY

Please enter your comment!
Please enter your name here

fifteen + twelve =