ಮೊಂತಾ ಚಂಡಮಾರುತ ಆಂಧ್ರಪ್ರದೇಶ ಹಾಗೂ ತೆಲಂಗಾಣದ ಕರಾವಳಿ ಪ್ರದೇಶಕ್ಕೆ ಅ. 27ರಂದು ಅಪ್ಪಳಿಸಲಿದೆ. ಗಂಟೆಗೆ 6 ಕಿ.ಮೀ. ವೇಗದಲ್ಲಿ ಸಂಚರಿಸುತ್ತಿರುವ ಈ ಚಂಡಮಾರುತ ಹಂತಹಂತವಾಗಿ ಆಂಧ್ರಪ್ರದೇಶ, ತೆಲಂಗಾಣದಲ್ಲಿ ಆವರಿಸಲಿದೆ. ಆನಂತರ, ಈ ಎರಡೂ ರಾಜ್ಯಗಳಿಗೆ ಹೊಂದಿಕೊಂಡಿರುವ ಕರ್ನಾಟಕದ ಗಡಿ ಪ್ರದೇಶದ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಒಂದು ವೇಳೆ ಚಂಡಮಾರುತದ ವೇಗ ಏನಾಗುತ್ತೆ, ಬೆಂಗಳೂರು ಮತ್ತಿತರ ಜಿಲ್ಲೆಗಳಲ್ಲಿ ಮೇಲೆ ಈ ಚಂಡಮಾರುತದ ಎಫೆಕ್ಟ್ ಏನು?
ಹೈಲೈಟ್ಸ್:
- ಮೊಂತಾ ಚಂಡಮಾರುತದ ಎಫೆಕ್ಟ್ ಮೊದಲು ಆಗುವುದು ಆಂಧ್ರಪ್ರದೇಶ, ತೆಲಂಗಾಣದ ಮೇಲೆ.
- ಆನಂತರ, ಈ ಎರಡೂ ರಾಜ್ಯಗಳ ಗಡಿ ಭಾಗಕ್ಕೆ ಹತ್ತಿರದಲ್ಲಿರುವ ಕರ್ನಾಟಕದ ಜಿಲ್ಲೆಗಳಿಗೆ ಎಫೆಕ್ಟ್.
- ಆದರ, ಬೆಂಗಳೂರು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗಬಹುದು ಅಥವಾ ಮೋಡ ಕವಿದ ವಾತಾವರಣ ಸಾಧ್ಯತೆ.

ಅಪ್ಪಳಿಸಲಿದೆ ಮೋಂತಾ ಸೈಕ್ಲೋನ್; ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್: ಯಾವ್ಯಾವ ಜಿಲ್ಲೆಗಳಲ್ಲಿ ಅತೀ ಹೆಚ್ಚು ಮಳೆ?
ಬೆಂಗಳೂರು ಸೇರಿ ಕರ್ನಾಟಕದಲ್ಲಿ ಎಲ್ಲೆಲ್ಲಿ ಮಳೆ?
ಚಂಡಮಾರುತದ ಕೇಂದ್ರಬಿಂದುವು ಕರ್ನಾಟಕದಿಂದ ದೂರವಿದ್ದರೂ, ಆಂಧ್ರಪ್ರದೇಶ ಹಾಗೂ ತೆಲಂಗಾಣದ ಗಡಿ ಭಾಗಗಳಿಗೆ ಹತ್ತಿರದಲ್ಲಿರುವ ಕರ್ನಾಟಕದ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಬೀಳುವ ಸಾಧ್ಯತೆಗಳು ದಟ್ಟವಾಗಿವೆ. ಉದಾಹರಣೆಗೆ, ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್ ಹೀಗೆ ಗಡಿಯಲ್ಲಿರುವ ಹಲವಾರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು, ಮೈಸೂರು ಪ್ರಾಂತ್ಯ ಹಾಗೂ ಮಲೆನಾಡಿನಲ್ಲಿ ಮಳೆ
ಚಂಡಮಾರುತದ ಶಕ್ತಿ ವೃದ್ಧಿಯಾದರೆ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳಬಹುದು. ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಮುಂದಿನ 10 ದಿನ ಭಾರೀ ಮಳೆ ಎಚ್ಚರಿಕೆ; 7 ಜಿಲ್ಲೆಗೆ ಆರೆಂಜ್ ಅಲರ್ಟ್
ಎಷ್ಟು ದಿನ ಕಾಡುತ್ತೆ ಈ ಮಳೆ?
ಹವಾಮಾನ ಇಲಾಖೆಯ ಪ್ರಕಾರ, ಅ. 28-29ರವರೆಗೆ ಚಂಡಮಾರುತದ ಎಫೆಕ್ಟ್ ಇದ್ದೇ ಇರುತ್ತದೆ. ಈ ಮೊದಲೇ ಹೇಳಿದಂತೆ, ಆಂಧ್ರಪ್ರದೇಶದ ಗಡಿ ಭಾಗದಲ್ಲಿ ಹೊಂದಿಕೊಂಡಿರುವ ಕರ್ನಾಟಕದ ಜಿಲ್ಲೆಗಳಿಗೆ ಮಳೆ ಬೀಳುವ ಸಾಧ್ಯತೆಗಳಿವೆ. ಹೆಚ್ಚೆಂದರೆ ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಚಿಕ್ಕಮಗಳೂರು ಮುಂತಾದ ಜಿಲ್ಲೆಗಳಲ್ಲಿ ಮಳೆಯಾಗಬಹುದು. ಆದರೆ, ಚಂಡಮಾರುತದ ವೇಗ ಕುಗ್ಗಿದರೆ ಬೆಂಗಳೂರು ಹಾಗೂ ದಕ್ಷಿಣ ಒಳನಾಡು – ಮಲೆನಾಡಿನ ಜಿಲ್ಲೆಗಳಲ್ಲಿ ಅ. 28-29ರಂದು ಮೋಡ ಮುಸುಕಿದ ವಾತಾವರಣ ಇರುತ್ತದೆ ಎಂದು ತಜ್ಞರು ತಿಳಿಸಿದ್ದಾರೆ.
ಬಂಗಾಳಕೊಲ್ಲಿ ಅ. 27ರಂದು ಕರಾವಳಿಯಲ್ಲಿ ಮಳೆ
ಬಂಗಾಳ ಕೊಲ್ಲಿಯಲ್ಲಿ ‘ಮೊಂತಾ’ ಚಂಡಮಾರುತ ರೂಪುಗೊಳ್ಳುತ್ತಿದ್ದು, ಅಕ್ಟೋಬರ್ 27 ರಿಂದ ಕರಾವಳಿ ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಚಂಡಮಾರುತವು ಕರಾವಳಿಯತ್ತ ಸಾಗುತ್ತಿದ್ದು, ವಿಶಾಖಪಟ್ಟಣಂ, ಚೆನ್ನೈ, ಕಾಕಿನಾಡ, ಮತ್ತು ಗೋಪಾಲಪುರ ಮುಂತಾದ ಪ್ರದೇಶಗಳ ಮೇಲೆ ಪ್ರಭಾವ ಬೀರಲಿದೆ. ಪರಿಸ್ಥಿತಿಯನ್ನು ಎದುರಿಸಲು ವಿಪತ್ತು ನಿರ್ವಹಣಾ ತಂಡಗಳನ್ನು ಸನ್ನದ್ಧಗೊಳಿಸಲಾಗಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

