ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಅವರೊಂದಿಗೆ ವಿವಾಹವಾಗಿದ್ದಾರೆ. ಕನಕಪುರ ರಸ್ತೆಯ ರೆಸಾರ್ಟ್‌ನಲ್ಲಿ ನಡೆದ ಸರಳ ವಿವಾಹದಲ್ಲಿ ಕುಟುಂಬ ಸದಸ್ಯರು ಮತ್ತು ಆಪ್ತರು ಭಾಗವಹಿಸಿದ್ದರು.

ಬೆಂಗಳೂರು: ಇಂದು ಸಂಸದ ತೇಜಸ್ವಿ ಸೂರ್ಯ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ರೆಸಾರ್ಟ್‌ನಲ್ಲಿ ತೇಜಸ್ವಿ ಸೂರ್ಯ ಮತ್ತು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಮದುವೆ ನಡೆದಿದೆ. ಮದುವೆಗೆ ಎರಡು ಕುಟುಂಬದ ಸದಸ್ಯರು ಮತ್ತು ಅತ್ಯಾಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. ಬುಧವಾರ ಸಂಜೆಯಿಂದಲೇ ವರಪೂಜೆ ಸೇರಿದಂತೆ ಮದುವೆ ಶಾಸ್ತ್ರಗಳು ನಡೆದಿದ್ಗವು. ಇಂದು ಬೆಳಗ್ಗೆ 10.45 ತುಲಾ ಲಗ್ನದಲ್ಲಿ ಶಿವಶ್ರಿ ಕೊರಳಿಗೆ ತೇಜಸ್ವಿ ಸೂರ್ಯ ಮಾಂಗಲ್ಯಧಾರಣೆ ಮಾಡಿದ್ದಾರೆ. ಇಂದೇ ಶಿವಶ್ರೀ ಅವರನ್ನು ಮನೆ ತುಂಬಿಸಿಕೊಳ್ಳುವ ಶಾಸ್ತ್ರ ನಡೆಯಲಿದೆ. ಮದುವೆಗೆ ಕೇಂದ್ರ ಸಚಿವ ವಿ,ಸೋಮಣ್ಣ ತೆರಳಿ ನವಜೋಡಿಗೆ ಆಶೀರ್ವದಿಸಿದ್ದಾರೆ.
ಮಾರ್ಚ್ 9ರಂದು ಬೆಂಗಳೂರಿನ ಅರಮನೆ ಮೈದಾನದ ಗಾಯಿತ್ರಿ ವಿಹಾರದಲ್ಲಿ ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಸ್ಕಂದ ಪ್ರಸಾದ್ ಆರತಕ್ಷತೆ ನಡೆಯಲಿದೆ. ಈ ವೇಳೆ ರಾಜ್ಯ-ದೇಶದ ರಾಜಕೀಯ ಗಣ್ಯರು ಭಾಗಿಯಾಗುವ ಸಾಧ್ಯತೆಗಳಿವೆ.
ಬೆಂಗಳೂರಲ್ಲಿ ನಡೆದ ಏರೋ ಶೋಗೂ ಸಹ ಭಾವೀ ಪತ್ನಿಯೊಂದಿಗೆ ಸಂಸದ ತೇಜಸ್ವಿ ಸೂರ್ಯ ಆಗಮಿಸಿದ್ದರು. ನಂತರ ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡಿದ್ದರು.
ಇದನ್ನೂ ಓದಿ: ಭಾವಿ ಪತ್ನಿಯೊಂದಿಗೆ ತೇಜಸ್ವಿ ಸೂರ್ಯ ಏರ್ ಶೋ ವೀಕ್ಷಣೆ Aero India Air Show 2025 In Bangalore Kannada News
ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಸಾಂಪ್ರದಾಯಿಕವಾಗಿ ವಿವಾಹ ಕಾರ್ಯಕ್ರಮ ನಡೆಯಲಿದೆ. ತಮಿಳುನಾಡು ಮೂಲದ ಶಿವಶ್ರೀ ಅವರು ಈಗಾಗಲೇ ಗಾಯನದಿಂದ ಖ್ಯಾತರಾಗಿದ್ದಾರೆ. ಇತ್ತೀಚೆಗೆ ಆರ್ಟ್ ಆಫ್ ಲಿವಿಂಗ್‌ನಲ್ಲಿ ನಡೆದ ಕಾರ್ಯಕ್ರಮದ ವೇಳೆ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದರು. ಶಿವಶ್ರೀ ಅವರು ಗಾಯನವಲ್ಲದೆ ಭರತನಾಟ್ಯ ಕಲಾವಿದೆ ಕೂಡ ಹೌದು. ಮದ್ರಾಸ್ ವಿಶ್ವವಿದ್ಯಾಲಯದಿಂದ ಭರತನಾಟ್ಯದಲ್ಲಿ ಪದವಿಯನ್ನೂ ಗಳಿಸಿದ್ದಾರೆ. ಆಯೋಧ್ಯೆ ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ಶಿವಶ್ರೀ ಅವರು ಹಾಡಿದ ರಾಮನ ಕುರಿತ ಗೀತೆಯನ್ನು ಮೆಚ್ಚಿ ಪ್ರಧಾನಿ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.
ಇದನ್ನೂ ಓದಿ: Aero India 2025 Highlights: ಏರ್ ಶೋದಲ್ಲಿ ತೇಜಸ್ವಿ ಸೂರ್ಯ & ಸ್ವಾಮೀಜಿ ಹೆಲಿಕಾಪ್ಟರ್‌ನಲ್ಲಿ ಹಾರಾಟ